ಕಾರವಾರ : ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗಾಗಿ ಜನವರಿ ತಿಂಗಳಲ್ಲಿ ಟ್ರಾವೆಲ್ ಮತ್ತು ಟೂರಿಸ್ಟ್ ಗೈಡ್ ಹಾಗೂ ಫೆಬ್ರವರಿ ತಿಂಗಳಲ್ಲಿ ಮೊಬೈಲ್‌ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಿಕೊಳ್ಳಲು ಜನವರಿ 10 ಕೊನೆಯ ದಿನವಾಗಿದೆ. ತರಬೇತಿ ಅವಧಿಯಲ್ಲಿ ಊಟ ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶೀಲತೆಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟ ತಂತ್ರಗಳು, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿನಿAದ ಸಾಲ ಪಡೆದು ಸ್ವಉದ್ಯೋಗ ಪ್ರಾಂಭಿಸಲು ಬೇಕಾದ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ Tel:+918217236973, Tel:+919483485489, Tel:+919482188780 ನ್ನು ಸಂಪರ್ಕಿಸಬಹುದು ಎಂದು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.