ನವದೆಹಲಿ: ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ತೀವ್ರವಾಗಿ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದಾಖಲಾಗಿದ್ದ ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
92 ವರ್ಷ ವಯಸ್ಸಿನ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಗುರುವಾರ ಸಂಜೆಯ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಅವರನ್ನು ಏಮ್ಸ್‌ಗೆ ದಾಖಲು ಮಾಡಲಾಗಿತ್ತು.
ಈ ಬಗ್ಗೆ ರಾಬರ್ಟ್ ವಾದ್ರಾ ಟ್ವೀಟ್ ಮಾಡಿದ್ದು, “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಬಗ್ಗೆ ತಿಳಿದು ನನಗೆ ತುಂಬಾ ದುಃಖವಾಗಿದೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಆಳವಾದ ಸಂತಾಪಗಳು. ನಮ್ಮ ದೇಶಕ್ಕೆ ನೀವು ಮಾಡಿದ ಸೇವೆಗೆ ಧನ್ಯವಾದಗಳು. ನಿಮ್ಮ ಆರ್ಥಿಕ ಕ್ರಾಂತಿಗಾಗಿ ನೀವು ಯಾವಾಗಲೂ ನೆನಪಿನಲ್ಲಿರುತ್ತೀರಿ ಮತ್ತು ಪ್ರಗತಿಪರ ಬದಲಾವಣೆಗಳನ್ನು ನೀವು ದೇಶಕ್ಕೆ ತಂದಿದ್ದೀರಿ’ ಎಂದು ಬರೆದುಕೊಂಡಿದ್ದಾರೆ.