ಕಾರವಾರ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖಾ ವತಿಯಿಂದ 2024-25 ನೇ ಸಾಲಿನಲ್ಲಿ 5 ವಾರದ ಕೋಳಿಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಭಾಗದ ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡದ/ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ತಲಾ 20 ರಂತೆ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತ ಮಹಿಳೆಯರು ಜ.8 ರೊಳಗೆ ಆಯಾ ತಾಲೂಕು ಮುಖ್ಯ ಪಶುವ್ಶೆದ್ಯಾಧಿಕಾರಿಗಳು (ಆಡಳಿತ) ಪಶುಪಾಲನಾ ಇಲಾಖೆಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗೆ ಆಯಾ ತಾಲೂಕು ಆಸ್ಪತ್ರೆ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.