ಕಾರವಾರ: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಯುವ ಜನತೆಯ ಉಜ್ವಲ ಭವಿಷಕ್ಕಾಗಿ ಜಾರಿಗೆ ತಂದಿರುವ ಯುವನಿಧಿ ನೋಂದಣಿ ಪ್ರಕ್ರಿಯೆಯ 2ನೇ ಹಂತದ ಪ್ರಚಾರ ಬ್ಯಾನರ್ ಮತ್ತು ಪೋಸ್ಟರ್‌ಗಳನ್ನು ಅಪರ ಜಿಲ್ಲಾಧಿಕಾರಿ ಸಾಜೀದ್ ಅಹ್ಮದ್ ಮುಲ್ಲಾ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಡಿ.ಟಿ ನಾಯ್ಕ, ಉದ್ಯೋಗ ವಿನಿಮಯಾಧಿಕಾರಿ ವಿನೋದ ನಾಯ್ಕ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಮೇಶ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಲತಾ ನಾಯಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ಕೌಶಲ್ಯಾಭಿವೃಧ್ಧಿ ಇಲಾಖೆಯ ಸಹಾಯಕ ನಿರ್ದೇಶಕ ರಜತ ಹಬ್ಬು ಮತ್ತಿತರರು ಇದ್ದರು.