ದಾಂಡೇಲಿ : ತಾಲ್ಲೂಕಿನ ಹಳಿಯಾಳ ಮುಖ್ಯ ರಸ್ತೆಯ ಶ್ರೇಯಸ್ ಪೇಪರ್ ಮಿಲ್ ಹತ್ತಿರದ ಶ್ರೀ ಸದ್ಗುರು ಯಲ್ಲಾಲಿಂಗೇಶ್ವರ ಶಾಖಾಮಠದ 34ನೇ ವರ್ಷದ ವಾರ್ಷಿಕ ಜಾತ್ರಾ ಮಹೋತ್ಸವವು ಗುರುವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು.
ಭಜನಾ ಕಾರ್ಯಕ್ರಮದ ಮೂಲಕ ಜಾತ್ರೋತ್ಸವಕ್ಕೆ ಚಾಲನೆಯನ್ನು ನೀಡಲಾಯಿತು. ಶ್ರೀ ಸ್ವಾಮಿ ಸನ್ನಿಧಿಯಲ್ಲಿ ಬೆಳಗ್ಗಿನಿಂದಲೇ ವಿವಿಧ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿತು. ಮುಗಳಖೋಡ ಮಠದ ಪರಮಪೂಜ್ಯ ಶ್ರೀ ಷಡಕ್ಷರಿ ಶಿವಯೋಗಿ ಡಾ.ಮುರುಘರಾಜೇಂದ್ರ ಮಹಾಸ್ವಾಮಿಗಳವರ ಶಿಷ್ಯರಾದ ಪೂಜ್ಯ ಸಂಜು ಮಹಾರಾಜ ಅವರು ಜಾತ್ರೋತ್ಸವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಮಾರ್ಗದರ್ಶನವನ್ನು ನೀಡಿದರು.
ಮಧ್ಯಾಹ್ನ ಮಹಾಪೂಜೆಯ ನಂತರ ಸಾರ್ವಜನಿಕ ಅನ್ನ ಸಂತರ್ಪಣೆಯು ಜರುಗಿತು. ಜಾತ್ರೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.
ಜಾತ್ರೋತ್ಸವದ ಯಶಸ್ಸಿಗೆ ಶಾಖಾ ಮಠದ ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಭಕ್ತಾಭಿಮಾನಿಗಳು ಶ್ರಮಿಸಿದ್ದರು.