ಸಿದ್ದಾಪುರ: ಪಟ್ಟಣದ ಬಸವನಗಲ್ಲಿ ನಿವಾಸಿ ಗೀತಾ ಪ್ರಭಾಕರ ಹುಂಡೇಕರ್ ಅವಳನ್ನು ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ವಿನಾಯಕ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಟೈಟಿ ಆಡಳಿತ ಮಂಡಳಿಯವರು, ಸಿಬ್ಬಂದಿಗಳು ಹಾಗೂ ಪಿಗ್ಮಿ ಸಂಗ್ರಹಕಾರರು ಸಿದ್ದಾಪುರ ಆರಕ್ಷಕ ನಿರೀಕ್ಷರಿಗೆ ಶನಿವಾರ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿನಾಯಕ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಟೈಟಿ ಆಡಳಿತ ಮಂಡಳಿ ಅಧ್ಯಕ್ಷ ಆನಂದ ಈರಾ ನಾಯ್ಕ ಸಂಘದ ಪಿಗ್ಮಿ ಸಂಗ್ರಹಕಳಾದ ಗೀತಾ ಪ್ರಭಾಕರ ಹುಂಡೇಕರ್ ಅವಳ ಅಮಾನುಷ ಕೊಲೆಯಿಂದಾಗಿ ಸಿದ್ದಾಪುರ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ದುಷ್ಕರ್ಮಿಗಳನ್ನು ತಕ್ಷಣ ಬಂಧಿಸದಿದ್ದಲ್ಲಿ ತಾಲೂಕಿನಲ್ಲಿ ಮಹಿಳೆಯರು / ವೃದ್ಧರು ಒಂಟಿಯಾಗಿ ವಾಸಿಸಲು ಭಯಪಡುವ ವಾತಾವರಣ ಸೃಷ್ಟಿಯಾಗಿ ಹಣಕಾಸು ಸಂಸ್ಥೆಗಳಲ್ಲಿ ಆತಂಕ ಉಂಟುಮಾಡಿದೆ. ಸಿದ್ದಾಪುರದಲ್ಲಿ ಸಮರ್ಥ ಪೊಲೀಸ್ ಅಧಿಕಾರಿಗಳಿದ್ದು ಇಲಾಖೆ ಕೂಡಲೇ ಕೊಲೆ ಪ್ರಕರಣವನ್ನು ಬೇಧಿಸಿ ಮೃತರ ಸಾವಿಗೆ ನ್ಯಾಯ ಕೊಡಿಸುವುದರ ಜತೆಗೆ ಸ್ಥಳೀಯರು ನೆಮ್ಮದಿಯಿಂದಜಿವನ ನಡೆಸುವುದಕ್ಕೆ ಅವಕಾಶ ನೀಡಬೇಕೆಂದು ಆಗ್ರಹಿಸಿದರು.
ನಿರ್ದೇಶಕರಾದ ವಿನಾಯಕ ನಾಯ್ಕ, ಪ್ರಧಾನ ವ್ಯವಸ್ಥಾಪಕ ಶ್ರೀಧರ ಹೆಗಡೆ, ವಿಭಾಗೀಯ ವ್ಯವಸ್ಥಾಪಕ ಪ್ರಶಾಂತ ನಾಯ್ಕ ಹಾಗೂ ಸಿಬ್ಬಂದಿಗಳಿದ್ದರು.