ಶಿರಸಿ: ಶಿರಸಿ ಮೂಲದ ಪ್ರಸನ್ನ ಹೆಗಡೆ ಇವರಿಗೆ ವಾಯು ಸೇನೆಯಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಬೆಂಗಳೂರಿನಲ್ಲಿ ನಡೆದ ತೃತೀಯ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ದೇಶ ರತ್ನ ಪುರಸ್ಕಾರವನ್ನು ನೀಡಿ ಗೌರವಿಸಲಾಗಿದೆ.
2014ರಲ್ಲಿ ಹರತೀಯ ವಾಯುಸೇನೆಗೆ ಸೇರ್ಪಡೆಗೊಂಡರು. ಸೇನೆಯ ತಾಂತ್ರಿಕ ವಿಭಾಗದಲ್ಲಿ ಸೇವೆಸಲ್ಲಿಸುತ್ತಿರುವ ಇವರು, ಭಾರತೀಯ ವಾಯುಪಡೆಯಲ್ಲಿ ವಿವಿಧ ಕಾರ್ಯಾಚರಣೆಗಳಿಗಾಗಿ USA, ದುಬೈ, ಸ್ಕಾಟ್ಲಂಡ್‌ಗೆ ಭೇಟಿ ನೀಡಿದ್ದಾರೆ. ಆಪರೇಷನ್ ಗಂಗಾದ ಭಾಗ 2022 ರ ರಷ್ಯಾದ ಉಕ್ರೇನ್ ಆಕ್ರಮಣದ ಸಮಯದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ಭಾರತ ಸರ್ಕಾರವು ನಡೆಸಿದ ಸ್ಥಳಾಂತರಿಸುವ ಕಾರ್ಯಾಚರಣೆಗಾಗಿ ಎರಡು ಬಾರಿ ಹಂಗೇರಿಗೆ ಭೇಟಿ ನೀಡಿದ್ದರು ಎಂಬುದು ಹೆಮ್ಮೆಯ ವಿಷಯವಾಗಿದೆ.