ಹೊನ್ನಾವರ: ಪಟ್ಟಣದ ಶರಾವತಿ ಸೇತುವೆ ಮೇಲೆ ಇಂದು ಮಂಗಳವಾರ ಬೆಳಗಿನ ಜಾವ 4 ಗಂಟೆಗೆ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ವಿಜಾಪುರದಿಂದ ಮಂಗಳೂರು ಹೊರಟಿದ್ದ ಕೆಎಸ್ಆರ್ಟಿಸಿ ಬಸ್, ಮಂಕಿ ಕಡೆಯಿಂದ ಹೊನ್ನಾವರದ ಕಡೆ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಮಾವಿನಕುರ್ವದ ರಾಘವೇಂದ್ರ ಸೋಮಯ್ಯ ಗೌಡ (34), ಸಂಶಿಯ ಗೌರೀಶ್ ನಾಯ್ಕ ( 25), ಖರ್ವಾದ ರಮೇಶ್ ನಾಯ್ಕ (22) ಮೃತ ಪಟ್ಟ ದುರ್ದೈವಿಗಳಾಗಿದ್ದಾರೆ.
ಘಟನಾ ಸ್ಥಳದಲ್ಲಿ ಹೊನ್ನಾವರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.