ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಶ್ವ ಹವ್ಯಕ ಮೂರನೇ ಸಮ್ಮೇಳನದಲ್ಲಿ ಕವಯತ್ರಿ ಮತ್ತು ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಎನ್. ಆರ್. ರೂಪಶ್ರೀ ಅವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಮೈಸೂರಿನ ಜಯಲಕ್ಷ್ಮೀ ದೇವಿ ಪದವಿ ಪೂರ್ವ ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕಿಯಾಗಿ ರೂಪಶ್ರೀ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಲೇಖಕಿಯಾಗಿರುವ ರೂಪಶ್ರೀ ಅವರು ಈಗಾಗಲೇ ಆರು ಪುಸ್ತಕಗಳನ್ನು ಪ್ರಕಟಿಸಿದ್ದು ಹಲವಾರು ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.