ಶಿರಸಿ : ಜಿಲ್ಲಾ ಕಾಂಗ್ರೇಸ್ ಸಮಿತಿಯ ಇಂಟೆಕ್ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲೆಯ ಕ್ಷತ್ರೀಯ ಮರಾಠಾ ಸಮುದಾಯದ ಮುಖಂಡ ಪಾಂಡುರಂಗ ಪಾಟೀಲರವರು ಕಾತೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲವು ಸಾಧಿಸಿರುವುದಕ್ಕೆ ಜಿಲ್ಲಾ ಕ್ಷತ್ರೀಯ ಮರಾಠಾ ಸಮುದಾಯದವರ ಪರವಾಗಿ ಕ್ಷತ್ರೀಯ ಮರಾಠಾ ಮಹಾ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ ಎಸಳೆ ಅವರಿಗೆ ಸನ್ಮಾನಿಸಿ ಇನ್ನೂ ಹೆಚ್ಚಿನ ಸಾಮಾಜಿಕ ರಾಜಕೀಯ, ಸೇವೆ ಮಾಡುವ ಅವಕಾಶ ಸಿಗಲಿ ಎಂದು ಹಾರೈಸಿದರು.
ಹೆಬ್ಬಾರರಿಂದ ಸನ್ಮಾನ: ಕಾತೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 12 ಸ್ಥಾನಕ್ಕೆ ನಡೆದ ನಿರ್ದೇಶಕರ ಚುನಾವಣೆಯಲ್ಲಿ 8 ಜನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದಕ್ಕೆ ಶಾಸಕ ಶಿವರಾಮ ಹೆಬ್ಬಾರ ಯಲ್ಲಾಪುರದ ಶಾಸಕರ ಕಛೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದ್ದಾರೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಆಯ್ಕೆಯಾಗಿದ್ದೀರಿ. ರೈತರ ಪರ ಕೆಲಸಗಳನ್ನು ಮಾಡಿಕೊಂಡು ಹೋಗಿ ಎಂದರು. ಈ ಸಂದರ್ಭದಲ್ಲಿ ಕಾತೂರು/ಹನುಮಾಪುರ ಗ್ರಾ.ಪಂ. ವ್ಯಾಪ್ತಿಯ ನೂರಾರು ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.