ಕಾರವಾರ: ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2025ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50%ರ ರಿಯಾಯಿತಿ ದರದಲ್ಲಿ ಮಾರಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬೇಕು.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯ ದೂರವಾಣಿ ಸಂಖ್ಯೆ:Tel:+9108022107705 ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ. ಎಂದು ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.