ದಾಂಡೇಲಿ : ತಾಲೂಕಿನ ಆಲೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ದಾಂಡೇಲಪ್ಪ ನಗರದಲ್ಲಿ ಸರಕಾರಿ ಜಮೀನನ್ನು ಅತಿಕ್ರಮಿಸಿ ಅಕ್ರಮವಾಗಿ ಮನೆ ಕಟ್ಟುತ್ತಿರುವುದರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲೆಂದು ಹೋಗಿದ್ದ ಕರ್ನಾಟಕ ರಣಧೀರ ಪಡೆಯ ದಾಂಡೇಲಿ ತಾಲೂಕು ಘಟಕದ ಅಧ್ಯಕ್ಷರಾದ ಯಲ್ಲಪ್ಪ ಬಿ.ನರಿಯವರ ಮೇಲೆ ಹಲ್ಲೆಗೆ ಯತ್ನಿಸಿ, ಮೊಬೈಲ್ ಕಸಿದು, ಜೀವ ಬೆದರಿಕೆಯೊಡ್ಡಿದ ಘಟನೆ ಬುಧವಾರ ನಡೆದಿದೆ.
ಕರ್ನಾಟಕ ರಣಧೀರ ಪಡೆಯ ತಾಲೂಕು ಘಟಕದ ಅಧ್ಯಕ್ಷರಾದ ಯಲ್ಲಪ್ಪ ಬಿ. ನರಿಯವರ ಆಗಿರುವ ಘಟನೆಯ ಕುರಿತಂತೆ ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ದೂರು ನೀಡುವುದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ.