ದಾಂಡೇಲಿ : ಉ.ಕ ಜಿಲ್ಲೆಯ ನುಡಿಜೇನು ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ಸಂದೀಪ ಸಾಗರ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡ ಮಾಡುವ ಜೀವಮಾನ ಸಾಧನೆ ವಿಶೇಷ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ರಾಜ್ಯದ ಪ್ರತಿಷ್ಠಿತ ದೃಶ್ಯ ಮಾಧ್ಯಮಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿರುವುದರ ಜೊತೆಗೆ ನುಡಿಜೇನು ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿಯೂ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಅವಿರತವಾಗಿ ಸೇವೆಯನ್ನು ಸಲ್ಲಿಸುತ್ತಿರುವುದನ್ನು ಪರಿಗಣಿಸಿ, ಕರ್ನಾಟಕ ಮಾಧ್ಯಮ ಅಕಾಡೆಮಿಯು ಸಂದೀಪ ಸಾಗರ ಅವರಿಗೆ ಈ ಪ್ರಶಸ್ತಿಯನ್ನು ಘೋಷಣೆ ಮಾಡಿದೆ.
ಈ ಪ್ರಶಸ್ತಿಗೆ ಆಯ್ಕೆಯಾದ ಸಂದೀಪ ಸಾಗರ ಅವರನ್ನು ಜಿಲ್ಲೆಯ ಗಣ್ಯರನೇಕರು ಅಭಿನಂದಿಸಿದ್ದಾರೆ.