ದಾಂಡೇಲಿ : ನಗರದ ಗಾಂಧಿನಗರದ ಖಂಜರಭಾಟ್ ಪ್ರದೇಶದಲ್ಲಿ ವಿವಾಹಿತ ವ್ಯಕ್ತಿಯೊಬ್ಬ ನೇಣಿಗೆ ಶರಣಾದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಖಂಜರಬಾಟ್ ನಿವಾಸಿ ಲಖನ್ ರಾಮು ಖಂಜರಬಾಟ್ (ವ:29) ಎಂಬಾತನೇ ನೇಣಿಗೆ ಶರಣಾದ ವಿವಾಹಿತ ವ್ಯಕ್ತಿಯಾಗಿದ್ದಾನೆ. ಈತ ಯಾವುದೋ ವಿಷಯವನ್ನು ಮನಸ್ಸಿಗೆ ಹೆಚ್ಚಿಕೊಂಡು, ಮನೆಯಲ್ಲಿ ಯಾರು ಇಲ್ಲದಿದ್ದ ಸಂದರ್ಭದಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ತಕ್ಷಣವೇ ಈತನ ಸಂಬಂಧಿಕರು ಹಾಗೂ ಸ್ಥಳೀಯರು ಸೇರಿ ಸಾರ್ವಜನಿಕ ಆಸ್ಪತ್ರೆಗೆ ಕರೆತಂದಿದ್ದಾರೆ. ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆಗೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.