ಹೊನ್ನಾವರ: ಪಟ್ಟಣದ ಮಲ್ನಾಡ್ ಪ್ರೊಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಸೆಂಟ್ರಲ್ ಸ್ಕೂಲ್‌ನ 5ನೇ ತರಗತಿ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಕುಮಾರಿ ವಿಧಾತ್ರಿ ಬಿ. ಇವಳು ಪ್ರಥಮ ಸ್ಥಾನ ಗಳಿಸಿ ಹರಿದ್ವಾರದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾಳೆ.
ಈಕೆಯ ಈ ಸಾಧನೆಗೆ ಆಡಳಿತ ಮಂಡಳಿಯ ಅಧ್ಯಕ್ಷರು , ಸರ್ವ ಸದಸ್ಯರು, ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ