ಕಾರವಾರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ 2022-23 ಮತ್ತು 2023-24 ನೇ ಸಾಲಿನಲ್ಲಿ ಪದವಿ /ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ತೇರ್ಗಡೆಯಾಗಿ, ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳಿಗೆ ಸೇವಾ ಸಿಂಧು ಪೋರ್ಟಲ್ ವೆಬ್ ಸೈಟ್ https://sevasindhugs.karnataka.gov.in ನಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಜನವರಿ 6 ರಿಂದ 20 ರ ವರೆಗೆ ವಿಶೇಷ ನೋಂದಣ ಅಭಿಯಾನ” ವನ್ನು ಯೋಜನಾ ಉದ್ಯೋಗ ವಿನಿಮಯ ಕಚೇರಿ, ಪಂಜಾಬ್ ನ್ಯಾಶನಲ್ ಬ್ಯಾಂಕ್ ಹತ್ತಿರ, ಸಿವಿಲ್ ಕೋರ್ಟ ರಸ್ತೆ, ಕಾರವಾರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.
ಪದವಿಧರರಿಗೆ ಪ್ರತಿ ತಿಂಗಳು ರೂ. 3000/- ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ. 1500/- ಗಳನ್ನು ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತದೆ. ಫಲಿತಾಂಶದ ದಿನಾಂಕದಿಂದ 180 ದಿನಗಳ ನಂತರ ಹೆಸರನ್ನು ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ಮೊದಲ ಕಂತಿನ ಹಣ ಪಾವತಿಯಾದ ನಂತರ ಪ್ರತಿ ತಿಂಗಳು 25 ನೇ ತಾರೀಖಿನೊಳಗಾಗಿ ಸ್ವಯಂ ಘೋಷಣೆ ಮಾಡುವುದು ಕಡ್ಡಾಯವಾಗಿದ್ದು, ಸೇವಾ ಸಿಂಧು ಪೋರ್ಟಲ್ನಲ್ಲಿ ‘ಉದ್ಯೋಗಿ’ ಅಥವಾ ‘ನಿರುದ್ಯೋಗಿ’ ಎನ್ನುವ ಕುರಿತು ಸ್ವಯಂ ಘೋಷÀಣೆ ಮಾಡಿ ಸ್ವೀಕೃತಿ ಪಡೆಯುವುದು ಅಗತ್ಯವಾಗಿರುತ್ತದೆ.
ಅರ್ಹ ಅಭ್ಯರ್ಥಿಗಳು ಗ್ರಾಮ ಒನ್ ಕೇಂದ್ರ ಅಥವಾ ಕರ್ನಾಟಕ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆ, ಮೊಬೈಲ್ ಸಂಖ್ಯೆ ಹೊಂದಿರಬೇಕು. ಅರ್ಜಿ ಸಲ್ಲಿಸಿ ನಂತರ ಸೇವಾ ಸಿಂಧು ಪೋರ್ಟಲ್ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿಕೊಂಡು ಒಂದು ವೇಳೆ ಅರ್ಜಿಯು ಅಪ್ರೂವ್ ಆಗದ ಸಂದರ್ಭದಲ್ಲಿ , ಸೂಚಿಸಲ್ಪಟ್ಟ ಇಲಾಖೆಯ ಕಚೇರಿಗಳಿಗೆ ತಮ್ಮ ಎಲ್ಲಾ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಅಪ್ರೂವ್ ಮಾಡಿಸಿಕೊಳ್ಳಬೇಕಾಗಿರುತ್ತದೆ
ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ. ಯೋಜನಾ ಉದ್ಯೋಗ ವಿನಿಮಯ ಕಚೇರಿ, ಕಾರವಾರ ದೂರವಾಣಿ ಸಂಖ್ಯೆ: Tel:+9108382226386 ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.