ದಾಂಡೇಲಿ : ರಾಜ್ಯದ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವುದರ ವಿರುದ್ಧ, ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಹಾಗೂ ಗುತ್ತಿಗೆದಾರರ ಆತ್ಮಹತ್ಯೆಯನ್ನು ಖಂಡಿಸಿ, ಬಿಜೆಪಿ ತಾಲೂಕು ಘಟಕದಿಂದ ಶನಿವಾರ ನಗರದ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಜೆ.ಎನ್.ರಸ್ತೆಯಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಬಿಜೆಪಿ ಘಟಕದ ಅಧ್ಯಕ್ಷರಾದ ಬುಧವಂತ ಗೌಡ ಪಾಟೀಲ್, ಮಾಜಿ ಅಧ್ಯಕ್ಷರಾದ ರೋಷನ್ ನೇತ್ರಾವಳಿ ಮತ್ತು ಚಂದ್ರಕಾಂತ ಕ್ಷೀರಸಾಗರ, ಬಿಜೆಪಿ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ರವಿ ಗಾಂವಕರ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಕಿಡಿಕಾರಿದರು. ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯವನ್ನು ತೀವ್ರವಾಗಿ ಖಂಡಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರು, ವಿವಿಧ ಮೋರ್ಛಾಗಳ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮತ್ತು ಪಕ್ಷದ ಸದಸ್ಯರು ಉಪಸ್ಥಿತರಿದ್ದರು.