ಜೋಯಿಡಾ : ಕರ್ನಾಟಕ ಸರಕಾರ, ಕಂದಾಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಇವರ ಸಂಯುಕ್ತ ಆಶ್ರಯದಡಿ ಅಂದಾಜು ಮೊತ್ತ 893.22 ಲಕ್ಷ ರೂ ಮೊತ್ತದಲ್ಲಿ ನಿರ್ಮಾಣಗೊಂಡಿರುವ ಜೋಯಿಡಾ ತಾಲ್ಲೂಕಿನ ತಾಲ್ಲೂಕು ಆಡಳಿತ ಸೌಧ ಕಟ್ಟಡದ ವಿದ್ಯುಕ್ತ ಲೋಕಾರ್ಪಣೆಯು ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಜನವರಿ 8ರಂದು ನಡೆಯಲಿದೆ.
ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ್ ಎಸ್.ವೈದ್ಯ ಅವರು ತಾಲೂಕು ಆಡಳಿತ ಸೌಧವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ, ಶಾಸಕರಾದ ಸತೀಶ್ ಸೈಲ್, ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರುಗಳಾದ ಶಿವರಾಮ ಹೆಬ್ಬಾರ್, ದಿನಕರ ಶೆಟ್ಟಿ, ಎಸ್ ವಿ.ಸಂಕನೂರು, ಶಾಂತರಾಮ ಸಿದ್ದಿ, ಗಣಪತಿ ಉಳ್ವೇಕರ, ಭೀಮಣ್ಣ ನಾಯ್ಕ ಹಾಗೂ ಜೋಯಿಡಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಿಮಾ ಮಿರಾಶಿ ಅವರು ಭಾಗವಹಿಸಲಿದ್ದಾರೆ.
ವಿವಿಧ ಇಲಾಖೆಗಳ ಸೇವೆಯನ್ನು ಸಾರ್ವಜನಿಕರಿಗೆ ಒಂದೇ ಸೂರಿನಡಿ ಕಲ್ಪಿಸುವ ಮಹತ್ವದ ಉದ್ದೇಶದೊಂದಿಗೆ ನೂತನ ತಾಲೂಕು ಆಡಳಿತ ಸೌಧ ನಿರ್ಮಾಣವಾಗಿದೆ ತಹಶೀಲ್ದಾರ್ ಮಂಜುನಾಥ ಮುನ್ನೊಳ್ಳಿ ಮಾಧ್ಯಮಕ್ಕೆ ನೀಡಿದ ಮಾಹಿತಿಯಲ್ಲಿ ತಿಳಿಸಿದರು.