Slide
Slide
Slide
previous arrow
next arrow

ಚಂದ್ರಗುತ್ತಿ-ಮಾರಿಗುಡಿ ಮಾರ್ಗ ರಸ್ತೆ ಕಾಮಗಾರಿಗೆ ಶಾಸಕ ಭೀಮಣ್ಣ ಚಾಲನೆ

300x250 AD

ಸಿದ್ದಾಪುರ: ತಾಲೂಕಿನ ಕಾನಗೋಡ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಚಂದ್ರಗುತ್ತಿ ಮುಖ್ಯ ರಸ್ತೆಯಿಂದ ಮಾರಿಗುಡಿ ಮಾರ್ಗದ ರಸ್ತೆ ನಿರ್ಮಾಣ ಕಾಮಗಾರಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು.

ಕಾನಗೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಂದ್ರಗುತ್ತಿ ಮುಖ್ಯ ರಸ್ತೆಯಿಂದ ಹಳ್ಳಿಬೈಲ್ ಮಾರಿಗುಡಿ ಮಾರ್ಗವಾಗಿ ಬಾಸಿಂಗ್ ಕಟ್ಟೆವರೆಗಿನ ರಸ್ತೆ ಕಳೆದ ಅನೇಕ ವರ್ಷಗಳಿಂದ ದುರಸ್ಥಿ ಕಾಣದೇ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಗ್ರಾಮಸ್ಥರು ಶಾಸಕ ಭೀಮಣ್ಣ ನಾಯ್ಕ ಅವರಲ್ಲಿ ಮನವಿ ಮಾಡಿ ಅದ್ಯತೆಯ ಮೇರೆಗೆ ರಸ್ತೆ ನಿರ್ಮಿಸಿಕೊಡುವಂತೆ ಆಗ್ರಹಿಸಿದ್ದರು. ಶಾಸಕರು ಸ್ಥಳೀಯರ ಮನವಿಗೆ ಸ್ಪಂದಿಸಿ ರಸ್ತೆಗೆ ಅನುದಾನ ನೀಡಿದ್ದು, ಮಂಗಳವಾರ ಕಾನಗೋಡಿನ ಮಾರಿಕಾಂಬಾ ದೇವಿಗೆ ಪೂಜೆ ಸಲ್ಲಿಸಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಪ್ರಸಕ್ತ ಸಾಲಿನ ಫೆಬ್ರವರಿಯಲ್ಲಿ ಕಾನಗೋಡ ಜಾತ್ರೆ ಇರುವುದರಿಂದ ತಕ್ಷಣ ಕೆಲಸ ಪ್ರಾರಂಭಿಸಿ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕಾನಗೋಡ ಗ್ರಾಮ ಪಂಚಾಯ್ತಿ ಅಧ್ಯಕ್ಷ ಶಿವರಾಯ ನಾಯ್ಕ, ಭೂ ನ್ಯಾಯ ಮಂಡಳಿ ಸದಸ್ಯ ಎಚ್.ಕೆ.ಶಿವಾನಂದ, ಮಾರಿಕಾಂಬಾ ದೇವಸ್ಥಾನದ ಅಧ್ಯಕ್ಷ ಕೆರಿಯಾ ನಾಯ್ಕ ಸಣ್ಣಟ್ಟಿ, ಪ್ರಧಾನ ಕಾರ್ಯದರ್ಶಿ ಶಂಕರ ನಾಯ್ಕ ಹಾಗೂ ಗ್ರಾಮಸ್ಥರು ಹಾಜರಿದ್ದರು.

300x250 AD
Share This
300x250 AD
300x250 AD
300x250 AD
Back to top