Slide
Slide
Slide
previous arrow
next arrow

ಕನಿಷ್ಠ ವೇತನ ಹೆಚ್ಚಳಕ್ಕೆ ದಾಂಡೇಲಿ ಕಾರ್ಮಿಕರ ಸಂಘದಿಂದ ಸಿಎಂಗೆ ಮನವಿ ಸಲ್ಲಿಕೆ

300x250 AD

ದಾಂಡೇಲಿ : ಕನಿಷ್ಠ ವೇತನವನ್ನು ಹೆಚ್ಚಳ ಮಾಡುವಂತೆ ದಾಂಡೇಲಿ ಕಾರ್ಮಿಕರ ಸಂಘದಿಂದ ನಗರದ ಸೋಮಾನಿ ವೃತ್ತದ ಹತ್ತಿರದಲ್ಲಿರುವ ಕಾರ್ಮಿಕ ನಿರೀಕ್ಷಕರ ಕಾರ್ಯಾಲಯದಲ್ಲಿ ಕಾರ್ಮಿಕ ನಿರೀಕ್ಷಕರಾದ ಚೇತನ ಹುಕ್ಮುಂನವರ ಮೂಲಕ ಮುಖ್ಯಮಂತ್ರಿಗಳಿಗೆ ಲಿಖಿತ ಮನವಿಯನ್ನು ಮಂಗಳವಾರ ಸಲ್ಲಿಸಲಾಯಿತು.

ಮುಖ್ಯಮಂತ್ರಿಗಳಿಗೆ ಸಲ್ಲಿಸಲಾದ ಮನವಿಯಲ್ಲಿ ನಿಯಮದಂತೆ ಐದು ವರ್ಷಗಳಿಗೊಮ್ಮೆ ಕನಿಷ್ಠ ವೇತನ ಪರಿಷ್ಕರಣೆ ಆಗಬೇಕಾಗಿದ್ದು, ಏಳು ವರ್ಷಗಳು ಕಳೆದರೂ ಕನಿಷ್ಠ ವೇತನ ಪರಿಷ್ಕರಣೆಯಾಗದೆ ಇರುವುದಿಂದ ಇದು ಕನಿಷ್ಠ ವೇತನ ಪಡೆಯುವ ಕಾರ್ಮಿಕರ ಮತ್ತು ಅವರ ಅವಲಂಬಿತ ಕುಟುಂಬದವರ ಕಷ್ಟಕ್ಕೆ ಮತ್ತು ದುಃಖಕ್ಕೆ ಕಾರಣವಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಬಡವರ, ಕಾರ್ಮಿಕರ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ. ಆದ್ದರಿಂದ ಈ ಕೂಡಲೇ ಕನಿಷ್ಠ ವೇತನ ಹೆಚ್ಚಳ ಮಾಡುವಂತೆ ಮನವಿಯಲ್ಲಿ ವಿನಂತಿಸಲಾಗಿದೆ.

300x250 AD

ಈ ಸಂದರ್ಭದಲ್ಲಿ ದಾಂಡೇಲಿ ಕಾರ್ಮಿಕರ ಸಂಘದ ಕಾರ್ಯಾಧ್ಯಕ್ಷರಾದ ಎಸ್.ಎಸ್‌.ಪೂಜಾರ, ಪ್ರಧಾನ ಕಾರ್ಯದರ್ಶಿ, ರಾಜೇಸಾಬ ಎಂ. ಕೇಸನೂರ ಹಾಗೂ ಪ್ರಮುಖರಾದ ಸುಭಾಷ್ ವಿತಾಳೆ, ರಾಜಶೇಖರ, ಸಿ.ಡಿ.ಬೈಲಾ, ದೇವರಾಜ ದಾರ್ಲ, ದಾದಾಪೀರ್, ನಾಗರಾಜ, ನಿಸಾರ್‌ ಹಾಗೂ ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top