ಹೊನ್ನಾವರ: ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಆಶ್ರಯದಲ್ಲಿ ಹೊನ್ನಾವರ ತಾಲೂಕು 11ನೇ ಸಾಹಿತ್ಯ ಸಮ್ಮೇಳನವನ್ನು ಫೆ.1ರಂದು ಕವಲಕ್ಕಿಯ ಶ್ರೀ ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ತಾಲೂಕ ಕಸಾಪ ಅಧ್ಯಕ್ಷ ಎಸ್.ಎಚ್.ಗೌಡ ತಿಳಿಸಿದರು.
ಪಟ್ಟಣದ ಪ್ರಭಾತನಗರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಲಯದಲ್ಲಿ ಆಯೋಜಿಸಿದ ಸಭೆಯಲ್ಲಿ ಅವರು ಮಾತನಾಡಿದರು. ಈ ಬಾರಿ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಿ ಈಗಾಗಲೇ ಹಲವು ಪೂರ್ವಭಾವಿ ಸಭೆ ನಡೆಸಿ ಸಿದ್ದತಾ ಕಾರ್ಯ ಮಾಡಿಕೊಳ್ಳಲಾಗುತ್ತಿದೆ. ಸಮ್ಮೇಳನದಲ್ಲಿ ವಿವಿಧ ಗೋಷ್ಠಿ ಆಯೋಜಿಸಲು ನಿರ್ಧರಿಸಲಾಗಿದೆ. ತಾಲೂಕು, ಜಿಲ್ಲೆ ಹಾಗೂ ರಾಜ್ಯದ ವಿವಿಧೆಡೆಯಿಂದ ಸಾಹಿತ್ಯಸಕ್ತರಿಗೆ ಆಹ್ವಾನ ನೀಡಲಾಗುವುದು. ಸಕಲ ಸಿದ್ದತಾ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಭಿಮಾನಿಗಳು ಆಗಮಿಸಿ ಸಮ್ಮೇಳನ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಕಸಾಪ ಕಾರ್ಯದರ್ಶಿ ಪಿ.ಆರ್.ನಾಯ್ಕ, ತಾಲೂಕ ಸಂಘದ ಗೌರವ ಕಾರ್ಯದರ್ಶಿ ಎಚ್.ಎಂ.ಮಾರುತಿ, ಗಜಾನನ ನಾಯ್ಕ, ಕೋಶಾಧ್ಯಕ್ಷ ನಾರಾಯಣ ಹೆಗಡೆ, ಸದಸ್ಯರಾದ ಜನಾರ್ದನ ಕಾಣಕೋಣಕರ್, ಮಹೇಶ ಭಂಡಾರಿ, ಸಾಧನಾ ಬರ್ಗಿ, ಈಶ್ವರ ಕೊಡಾಣಿ ಇದ್ದರು.