ಕಾರವಾರ: ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಾಥಮಿಕ ವಿಭಾಗದ 1 ರಿಂದ 7 ನೇ ತರಗತಿಯ ಬಾಲಕ/ಬಾಲಕಿಯರಿಗೆ ಮತ್ತು ಮಾಧ್ಯಮಿಕ ವಿಭಾಗದ 8 ರಿಂದ 10 ನೇ ತರಗತಿ ಬಾಲಕ/ಬಾಲಕಿಯರಿಗೆ ಪ್ರತ್ಯೇಕ ವಿಭಾಗದಲ್ಲಿ ಜಿಲ್ಲಾ ಮಟ್ಟದ ಮುಕ್ತ ಚದುರಂಗ ಸ್ಪರ್ಧೆಯನ್ನು ಜ.18 ರಂದು ಶಿರಸಿಯ ಅರಣ್ಯ ಭವನದಲ್ಲಿ ಏರ್ಪಡಿಸಲಾಗಿದೆ.
ವಿಜೇತ ಸ್ಪರ್ಧಾಳುಗಳಿಗೆ ನಗದು ಬಹುಮಾನ ವಿತರಿಸಲಾಗುವುದು. ಕಾರವಾರ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯ ಆಸಕ್ತ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.