ಕಾರವಾರ: ರಾಜ್ಯದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಜನವರಿ 10 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಕಾರವಾರ ತಾಲ್ಲೂಕಿನ ಕಾಮಗಾರಿಗಳ ಪರಿವೀಕ್ಷಣೆ. 10.30 ಕ್ಕೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ವಿಜ್ಞಾನ ಕೇಂದ್ರಕ್ಕೆ ಭೇಟಿ , 11 ಗಂಟೆಯಿಂದ 12.45 ರ ವರೆಗೆ ಅಂಕೋಲಾ ತಾಲ್ಲೂಕಿನ ಸಣ್ಣ ನೀರಾವರಿ ಇಲಾಖೆಯ ವಿವಿಧ ಕಾಮಗಾರಿಗಳ ಪರಿವೀಕ್ಷಣೆ. ಮಧ್ಯಾಹ್ನ 1 ಗಂಟೆಯಿAದ 1.45 ರ ವರೆಗೆ ಕುಮಟಾ ತಾಲ್ಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಯ ವಿವಿಧ ಕಾಮಗಾರಿಗಳ ಪರಿವೀಕ್ಷಣೆ. ನಂತರ ಗೋಕರ್ಣಕ್ಕೆ ಭೇಟಿ, 3.45 ರಿಂದ 5 ಗಂಟೆಯವರೆಗೆ ಹೊನ್ನಾವರ ತಾಲ್ಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಯ ವಿವಿಧ ಕಾಮಗಾರಿಗಳ ಪರಿವೀಕ್ಷಣೆ, 5 ಗಂಟೆಯಿAದ 6.55 ರ ವರೆಗೆ ಭಟ್ಕಳ ತಾಲ್ಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಯ ವಿವಿಧ ಕಾಮಗಾರಿಗಳ ಪರಿವೀಕ್ಷಣೆ. ಸಂಜೆ 7 ಗಂಟೆಗೆ ಭಟ್ಕಳ ಪ್ರವಾಸಿ ಮಂದಿರದಲ್ಲಿ ಸಣ್ಣ ನೀರಾವರಿ ಇಲಾಖೆಯ ಹಳಿಯಾಳ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ, ಮುರುಡೇಶ್ವರದಲ್ಲಿ ವಾಸ್ತವ್ಯ ಮಾಡುವರು.
ಜನವರಿ 11 ರಂದು ಬೆಳಗ್ಗೆ 9 ಗಂಟೆಗೆ ಮುರುಡೇಶ್ವರದಿಂದ ಕೊಲ್ಲೂರು ಗೆ ತೆರಳುವರು.