ಕಾರವಾರ-ಪ್ರಸಕ್ತ ಸಾಲಿನ ಸಂಕ್ರಾತಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ, ವಾ.ಕ.ರ.ಸಾ. ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 114 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.
ಜ. 10 ವಾರಂತ್ಯದ ದಿನ, ಜ.11 ಎರಡನೇ ಶನಿವಾರ, ಜ.12 ಭಾನುವಾರ ಹಾಗೂ ಜ.14 ರಂದು ಸಂಕ್ರಾತಿ ಹಬ್ಬವಿರುವುದರಿಂದ ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.
ಬೆಂಗಳೂರಿನಿAದ ರಾಜ್ಯ/ಅಂತರ ರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ಜ.10, 11 ಹಾಗೂ ಜ.13 ರಂದು ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹಬ್ಬ ಮುಗಿದ ಮೇಲೆ ಜ.14 ಜ,15 ಮತ್ತು ನಂತರದ ದಿನಗಳಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು.
ವಿಶೇಷ ಸಾರಿಗೆಗಳ ಸದುಪಯೋಗ ಪಡಿಸಿಕೊಳ್ಳುವದರೊಂದಿಗೆ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.
ವಾ.ಕ.ರ.ಸಾ. ಸಂಸ್ಥೆಯಿಂದ ವಿಶೇಷ ಹೆಚ್ಚುವರಿ ಸಾರಿಗೆ ವ್ಯವಸ್ಥೆ
