• Slide
    Slide
    Slide
    previous arrow
    next arrow
  • 2 ಕೋಟಿಗೂ ಹೆಚ್ಚು ಜನರಿಗೆ ಆಯುಷ್ಮಾನ್ ಭಾರತ್ ಯೋಜನೆ ಪ್ರಯೋಜನ; ಧರ್ಮೇಂದ್ರ ಪ್ರಧಾನ್

    300x250 AD

    ನವದೆಹಲಿ: ಆಯುಷ್ಮಾನ್ ಭಾರತ್ ಯೋಜನೆಯಿಂದ ಇದುವರೆಗೆ ಎರಡು ಕೋಟಿಗೂ ಹೆಚ್ಚು ಜನರು ಪ್ರಯೋಜನ ಪಡೆದಿದ್ದಾರೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ನಿನ್ನೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆರಂಭಿಸಿದ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅನ್ನು ಸ್ವಾಗತಿಸಿದ ಅವರು, ಇದು ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರ ಆರೋಗ್ಯ ಸೇವಾ ಸಂಬಂಧಿತ ಸಮಸ್ಯೆಯನ್ನು ಪರಿಹರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

    ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ದೇಶದಲ್ಲಿ ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಪ್ರಧಾನ್ ಹೇಳಿದ್ದಾರೆ. ಇದು ತಂತ್ರಜ್ಞಾನದ ಮೂಲಕ ಆರೋಗ್ಯ ಸೇವೆಗಳನ್ನು ಹೆಚ್ಚು ಸುಲಭವಾಗಿ ಪಡೆಯಲು ಸಹಾಯ ಮಾಡುತ್ತದೆ. ಈ ಉಪಕ್ರಮವು ಜನರಿಗೆ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ದಕ್ಷತೆಯ ಅನುಷ್ಠಾನ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವುದಲ್ಲದೆ ಜನರು ಆರ್ಥಿಕ ಸಂಕಷ್ಟಕ್ಕೆ ಜಾರಿದಂತೆ ರಕ್ಷಿಸುತ್ತದೆ ಎಂದು ಹೇಳಿದ್ದಾರೆ.

    300x250 AD

    ಪ್ರಧಾನ ಮಂತ್ರಿಯವರ ನೇತೃತ್ವದಲ್ಲಿ, ಭಾರತ ಸರ್ಕಾರವು ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳ ಜಾಲವನ್ನು ಬಲಪಡಿಸುತ್ತಿದೆ ಎಂದು ಅವರು ಹೇಳಿದ್ದಾರೆ.

    ನ್ಯೂಸ್ 13

    Share This
    300x250 AD
    300x250 AD
    300x250 AD
    Leaderboard Ad
    Back to top