Slide
Slide
Slide
previous arrow
next arrow

ಆಸರಕೇರಿ ವೆಂಕಟರಮಣ ದೇವಾಲಯದಲ್ಲಿ ವೈಕುಂಠ ಏಕಾದಶಿ ಆಚರಣೆ

300x250 AD

ಭಟ್ಕಳ: ವೈಕುಂಠ ಏಕಾದಶಿ ಅಂಗವಾಗಿ ಪಟ್ಟಣದ ಆಸರಕೇರಿಯ ನಾಮಧಾರಿ ಗುರುಮಠದ ವೆಂಕಟರಮಣ ದೇವಸ್ಥಾನಕ್ಕೆ ಸಾವಿರಕ್ಕೂ ಅಧಿಕ ಭಕ್ತರು ಭೇಟಿ ನೀಡಿ ವೈಕುಂಠ ದ್ವಾರದ ಮೂಲಕ ದೇವರ ದರ್ಶನ ಪಡೆದು ಪುನೀತರಾದರು.

ಮುಂಜಾನೆ 4 ಗಂಟೆಯಿಂದಲೇ ಭಜನೆ ಹಾಗೂ ಪೂಜಾ ಕೈಂಕರ್ಯಗಳು ಪ್ರಾರಂಭಗೊಂಡು, ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬಳಿಕ ಮುಂಜಾನೆ 6 ಗಂಟೆಯಿಂದ ಭಕ್ತರಿಗೆ ದೇವರ ದರ್ಶನಕ್ಕೆ ಅನುವು ಮಾಡಲಾಯಿತು. ಭಕ್ತರು ದೇವಸ್ಥಾನದ ಉತ್ತರದ ದ್ವಾರದ ಮೂಲಕ ದೇವಸ್ಥಾನದ ಒಳಗೆ ಪ್ರವೇಶಿಸಿ ದೇವರ ದರ್ಶನ ಪಡೆದರು. ದೇವಸ್ಥಾನದಲ್ಲಿ ಉತ್ತರ ದ್ವಾರವನ್ನು ವಿಶೇಷವಾಗಿ ಹೂವಿನಿಂದ ಅಲಂಕರಿಸಲಾಗಿತ್ತು. ದೇವರ ಉತ್ಸವ ಮೂರ್ತಿಯನ್ನು ವೈಕುಂಠ ದ್ವಾರದಲ್ಲಿ ಉಯ್ಯಾಲೆಯಲ್ಲಿ ಆಸೀನಗೊಳಿಸಿ ವಿಶೇಷವಾಗಿ ಅಲಂಕಾರಗೊಳಿಸಿ ಪೂಜೆ ಸಲ್ಲಿಸಲಾಯಿತು.

300x250 AD

ದೇವಸ್ಥಾನದ ಆಡಳಿತ ಸಮಿತಿ ವತಿಯಿಂದ ದೇವರ ದರ್ಶನಕ್ಕೆ ಆಗಮಿಸಿದ ಭಕ್ತರಿಗೆ ಪಾನಕ ಹಾಗೂ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ರಾತ್ರಿ 9 ಗಂಟೆಯ ತನಕ ಭಕ್ತರಿಗೆ ದೇವರ ದರ್ಶನ ಅನುವು ಮಾಡಲಾಯಿತು. ಬಳಿಕ ಮಹಾಪೂಜೆ ಸಲ್ಲಿಸಿ ಪ್ರಸಾದ ವಿತರಿಸಲಾಯಿತು

Share This
300x250 AD
300x250 AD
300x250 AD
Back to top