ಸಿದ್ದಾಪುರ: ಸಂಘ ಕಷ್ಟದ ಕಾಲದಲ್ಲಿದ್ದಾಗ ಅದರ ಚುಕ್ಕಾಣಿ ಹಿಡಿದು ಇಂದು ಸಂಘ ತನ್ನ ಪ್ರಾಮಾಣಿಕ ಹಾಗೂ ಪಾರದರ್ಶಕ ವ್ಯವಹಾರದ ಮೂಲಕ ಸಂಘದ ಅಭಿವೃದ್ಧಿಗೆ ಕಾರಣೀಕರ್ತರಾದ ಮಹಾಬಲೇಶ್ವರ ದೇವರು ಭಟ್ಟ ಅಗ್ಗೇರೆ ಅವರ ಆದರ್ಶ ಎಲ್ಲರಿಗೂ ಮಾದರಿಯಾಗಿದೆ ಎಂದು ಸಿದ್ದಾಪುರ ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಹೇಳಿದರು.
ತಾಲೂಕಿನ ಹಾರ್ಸಿಕಟ್ಟಾ ಗಜಾನನೋತ್ಸವ ಸಮಿತಿಯಲ್ಲಿ ಮಂಗಳವಾರ ನಿಧನ ಹೊಂದಿದ ಹಾರ್ಸಿಕಟ್ಟಾ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದ ಮಹಾಬಲೇಶ್ವರ ದೇವರು ಭಟ್ಟ ಅಗ್ಗೇರೆ ನುಡಿನಮನ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಿ ಅವರು ಬುಧವಾರ ಮಾತನಾಡಿದರು.
ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತ್ರೀ ಬಿಳಗಿ, ಬಿದ್ರಕಾನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಹೆಗಡೆ,ಉಪಾಧ್ಯಕ್ಷ ಪ್ರಕಾಶ ಹೆಗಡೆ ಮುತ್ತಿಗೆ, ನಿರ್ದೇಶಕ ಪಿ.ಎಸ್.ಹೆಗಡೆ, ಹಾರ್ಸಿಕಟ್ಟಾ ಅಘನಾಶಿನಿ ಸಾಂಬಾರು ಮಂಡಳಿ ಅಧ್ಯಕ್ಷ ಎಸ್.ಆರ್.ಹೆಗಡೆ ಕುಂಬಾರಕುಳಿ, ಪಿ.ವಿ.ಹೆಗಡೆ ಹೊಸಗದ್ದೆ, ಗೋಪಾಲ ಹೆಗಡೆ ಹುಲಿಮನೆ, ನರೇಂದ್ರ ಹೆಗಡೆ ಹೊಂಡಗಾಸಿಗೆ, ಅಶೋಕ ಹೆಗಡೆ ಹೀನಗಾರ, ಅನಂತ ಹೆಗಡೆ ಹೊಸಗದ್ದೆ, ರಮೇಶ ಹೆಗಡೆ ಹಾರ್ಸಿಮನೆ, ಸಂತೋಷ ಹೆಗಡೆ ಹೊನ್ನೆಹದ್ದ, ಗಣಪತಿ ಹೆಗಡೆ ಸುಳಗಾರ ಮತ್ತಿತರರು ನುಡಿನಮನ ಸಲ್ಲಿಸಿದರು.
ಸಂಘದ ಮಾಜಿ ಅಧ್ಯಕ್ಷರುಗಳು, ಸದಸ್ಯರುಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಪುಷ್ಪನಮನ ಸಲ್ಲಿಸಿದರು. ಸಂಘದ ಮುಖ್ಯಕಾರ್ಯನಿರ್ವಾಹಕ ದಿನೇಶ ಹೆಗಡೆ, ಸಿಬ್ಬಂದಿಗಳಾದ ಗುಲ್ಜಾರ್ ಸಾಬ್, ಸುಮಂತ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.
ಕಾರ್ಯಕ್ರಮದ ಪೂರ್ವದಲ್ಲಿ ಒಂದು ನಿಮಿಷ ಮೌನಾಚರಣೆ ನಡೆಸಿ ಗೌರವ ಸಲ್ಲಿಸಲಾಯಿತು.