ಕಾರವಾರ: ಕಾರವಾರ ತಾಲೂಕಿನ ಬಿಣಗಾ ಗ್ರಾಮದ ಆದಿತ್ಯಾ ಬಿರ್ಲಾ ಗ್ರಾಸೀಂ ಇಂಡಸ್ಟ್ರೀಸ್ ಲಿಮಿಟೆಡ್ ಕ್ಲೋರಿನ್ ಘಟಕದಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾಗಿ 19 ಜನರು ಅಸ್ವಸ್ಥರಾಗಿದ್ದು ತಕ್ಷಣವೇ 14 ಜನರನ್ನು ಕಾರವಾರ ಜಿಲ್ಲಾಆಸ್ಪತ್ರೆ (KRIMS)ಗೆ ದಾಖಲಿಸಲಾಗಿದೆ ಹಾಗೂ 5 ಜನರನ್ನು ಆದಿತ್ಯಾ ಬಿರ್ಲಾ ಗ್ರಾಸೀಂ ಕಾರ್ಖಾನೆಯ ಒಳಾಂಗಣದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಸದರಿ ಅಸ್ವಸ್ತಗೋಂಡಿರುವ ಕಾರ್ಮಿಕರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಅಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದು ವೈದ್ಯರ ಸಲಹೆ ಮೇರೆಗೆ ಅವರನ್ನು 24 ಗಂಟೆಗಳ ಕಾಲ ನಿಗಾದಲ್ಲಿ ಇರಿಸಲಾಗಿದೆ.ಘಟನೆ ನಡೆದ ದಿನವೇ ಸುಮಾರು ಸಾಯಂಕಾಲ 8.40 ಗಂಟೆಗೆ ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆಯ ಅಧಿಕಾರಿಗಳು ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ಮತ್ತು ತನಿಖೆ ಮಾಡಿ ಕ್ರಮ ತೆಗೆದುಕೊಂಡಿದ್ದಾರೆ.
ಕಾರ್ಖಾನೆಯಲ್ಲಿನ ಸುರಕ್ಷತೆಯ ಕುರಿತು ಕ್ರಮ ತೆಗೆದುಕೊಳ್ಳಲು ಮತ್ತು ಮುಂದಿನ ದಿನಗಳಲ್ಲಿ ಅಹಿತಕರ ಘಟನೆ ನಡೆಯಂದಂತೆ ತಡೆಗಟ್ಟಲು ಕ್ರಮ ಮತ್ತು ಸುರಕ್ಷತಾ ಆಡಿಟ್ ಮಾಡಿಸಿ ಉತ್ತರ ಕನ್ನಡ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿಗೆ ವರದಿ ಸಲ್ಲಿಸಲು ಸೂಚಿಸುತ್ತಾ ಉತ್ಪಾದನಾ ಕಾರ್ಯವನ್ನು ಸ್ಥಗಿತಗೊಳೊಸಲು “ನಿಷೇದಾಜ್ನೆ ಆದೇಶ” ನೀಡಿದ್ದಾರೆ.
ಕಾರ್ಮಿಕ ಸಚಿವರಾದ ಸಂತೋಷ ಲಾಡ್ರವರು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲು ಆದೇಶಿಸಿದ್ದಾರೆ.
ಜಿಲ್ಲಾಡಳಿತವು ಬಾದಿತ ಕಾರ್ಮಿಕರ ಆರೋಗ್ಯ ಮತ್ತು ಕಾರ್ಖಾನೆಯಲ್ಲಿ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.