ಶಿರಸಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನ, ಶಿರಸಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ (ರಿ.) (ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ) ಜಿಲ್ಲಾ ಶಾಖೆ : ಉತ್ತರ ಕನ್ನಡ, ಇಕೋ ಕೇರ್ (ರಿ.), ಶಿರಸಿ, ಗ್ರೀನ್ ಕೇರ್ (ರಿ.) ಶಿರಸಿ. ಇವರ ಸಹಭಾಗಿತ್ವದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ರಾಷ್ಟ್ರೀಯ ಯುವ ದಿನ ಮತ್ತು ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಏರ್ಪಡಿಸಲಾಗಿತ್ತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ ತಾಲೂಕ ಆರೋಗ್ಯಾಧಿಕಾರಿಗಳಾದ ಡಾ.ವಿನಾಯಕ ಭಟ್ ಮಾತನಾಡಿ ಮಹಾನ್ ಅಧ್ಯಾತ್ಮಿಕ ನಾಯಕ, ತತ್ವಜ್ಞಾನಿ ಸ್ವಾಮಿ ವಿವೇಕಾನಂದ ರ ಗುಣಗಾನ ಮಾಡಿದರು.
ಮುಖ್ಯ ಅತಿಥಿಗಳಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ರಿ.) ಶಿರಸಿ ಘಟಕ ಅಧ್ಯಕ್ಷ ಕಿರಣಕುಮಾರ್ ಹೆಚ್. ನಾಯ್ಕ, ಮಾತನಾಡಿ ಸ್ವಾಮಿ ವಿವೇಕಾನಂದ ರ ಆದರ್ಶ ತತ್ವಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ, ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ (ರಿ.) ಜಿಲ್ಲಾ ಶಾಖೆ : ಉತ್ತರ ಕನ್ನಡ ಅಧ್ಯಕ್ಷ ಮಹೇಶ ಡಿ ನಾಯಕ ಅತಿಥಿಗಳಾದ ಅಸ್ಮಿತೆ ಪೌಂಡೇಶನ್ ಕಾರ್ಯನಿರ್ವಾಹಕ ನಿರ್ದೇಶಕ ರಿಯಾಜ್ ಸಾಗರ್, ಗ್ರೀನ್ ಕೇರ್ (ರಿ.) ಪ್ರಧಾನ ಕಾರ್ಯದರ್ಶಿ ಜಿತೇಂದ್ರಕುಮಾರ ತೋನ್ಸೆ ಕಾರ್ಯಕ್ರಮದ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ನಂತರ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘದ 2025 ರ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ಇಕೋ ಕೇರ್ ಸಂಸ್ಥೆ ಹಾಗೂ ಗ್ರೀನ್ ಕೇರ್ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
ಇಕೋ ಕೇರ್ ಸಂಸ್ಥೆಯ ಅಧ್ಯಕ್ಷ ಸುನೀಲ ಭೋವಿ ಸ್ವಾಗತಿಸಿದರು. ರಾಜೇಶ್ ವೆರ್ಣೇಕರ್ ಕಾರ್ಯಕ್ರಮ ನಿರ್ವಹಿಸಿದರು.