ಕುಮಟಾ: ತಾಲೂಕಿನ ಗೋಕರ್ಣ ಹೋಬಳಿಯ ಗಂಗೆಕೊಳ್ಳದ ಕಿತ್ತೂರು ರಾಣಿ ಚೆನ್ನಮ್ಮ ವಸತಿ (ಆಂಗ್ಲ ಮಾಧ್ಯಮ) ಶಾಲೆಗೆ 2025-26ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6 ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
5 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6 ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು ಜ.25 ರೊಳಗಾಗಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧಿನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ/ಕಾಲೇಜುಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಫೆ. 15 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶಾತಿ ಪರೀಕ್ಷೆಯನ್ನು ನಡೆಸಲಿದೆ.
ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಗಂಗೆಕೊಳ್ಳ ಮಜರೆ, ಗೋಕರ್ಣ ಹೋಬಳಿ ವಸತಿ ಶಾಲೆಗೆ ಸಂಪರ್ಕಿಸಬಹುದು. ಅರ್ಜಿ ಸಲ್ಲಿಸುವ ವಿಧಾನ, ಹಾಗೂ “ಮಾಹಿತಿ ಪುಸ್ತಕ-2025” ವನ್ನು ಪ್ರಾಧಿಕಾರದ ವೆಬ್ ಸೈಟ್ https://kea.kar.nic.in ನಲ್ಲಿ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವೆಬ್‌ಸೈಟ್: https://kreis.kar.nic.in ನಲ್ಲಿ ಪ್ರಚುರ ಪಡಿಸಲಾಗಿದೆ. ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಫೆ.6 ರಿಂದ ವಸತಿ ಶಾಲೆಗಳಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಗಂಗೆಕೊಳ್ಳ ಮಜರೆ, ಹೋಬಳಿ: ಗೋಕರ್ಣ ದೂರವಾಣಿ ಸಂಖ್ಯೆ:Tel:+919480143053 ಗೆ ಸಂಪರ್ಕಿಸುವಂತೆ ಗೋಕರ್ಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.