Slide
Slide
Slide
previous arrow
next arrow

ಅಯ್ಯಪ್ಪ ಸ್ವಾಮಿ ಜಾತ್ರೆಯಲ್ಲಿ ದುರ್ಘಟನೆ: ಶಾಸಕರ ಪುತ್ರನಿಂದ ಗಾಯಾಳುಗಳಿಗೆ ಸಾಂತ್ವನ

300x250 AD

ಸಿದ್ದಾಪುರ: ಪಟ್ಟಣದ ಬಾಲಿಕೊಪ್ಪದ ಅಯ್ಯಪ್ಪ ಸ್ವಾಮಿ ಜಾತ್ರೆ ಸಂದರ್ಭದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಯೋಗಕ್ಷೇಮವನ್ನು ಶಾಸಕ ಭೀಮಣ್ಣ ನಾಯ್ಕ ಪುತ್ರ ಹಾಗೂ ಯುವ ನಾಯಕ ಅಶ್ವಿನ್ ಭೀಮಣ್ಣ ನಾಯ್ಕ ವಿಚಾರಿಸಿದರು.

ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ನಟ ಶಿವರಾಜಕುಮಾರ ಆರೋಗ್ಯ ವಿಚಾರಿಸಲು ಅಮೇರಿಕಾಕ್ಕೆ ತೆರಳಿರುವುದರಿಂದ ತಮ್ಮ ಅನುಪಸ್ಥಿತಿಯಲ್ಲಿ ಪುತ್ರನನ್ನು ಕಳುಹಿಸಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಸಿದ್ದಾಪುರ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನು ಮಾತನಾಡಿಸಿ ಧೈರ್ಯ ತುಂಬಿದ್ದಾರೆ. ಈ ದುರ್ಘಟನೆಯಲ್ಲಿ ಮೃತಪಟ್ಟ ದೀಪಾ ರಾಮ ಗೌಡಾ ಇವರ ಆತ್ಮಕ್ಕೆ ಶಾಂತಿ ಕೋರಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

300x250 AD

ಶಾಸಕರು ಅಮೇರಿಕಾದಿಂದ ಮರಳಿದ ನಂತರ ಮೃತಳ ಮನೆಗೆ ಹಾಗು ಗಾಯಾಳುಗಳ ಮನೆಗೆ ಬೇಟಿ ನೀಡಲಿದ್ದಾರೆಂದು ತಿಳಿಸಿದರು. ಈ ಸಂದರ್ಭದಲ್ಲಿ ತಹಶಿಲ್ದಾರ ಎಂ.ಆರ್.ಕುಲಕರ್ಣಿ, ತಾಲೂಕಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಬಾಲಕೃಷ್ಣ ನಾಯ್ಕ, ಅಣ್ಣಪ್ಪ ನಾಯ್ಕ ಶಿರಳಗಿ ಮತ್ತಿತರರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top