ಸಿದ್ದಾಪುರ: ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯಲಿರುವ 46ನೇ ಸೀನಿಯರ್ ರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗೆ ಪಟ್ಟಣದ ಮಂಜುನಾಥ ಎಂ. ನಾಯ್ಕ ಆಯ್ಕೆಯಾಗಿದ್ದಾರೆ.
ಕರ್ನಾಟಕ ಸ್ಟೇಟ್ ಅಮೇಚೂರ್ ಯೋಗ ಫೆಡರೇಶನ್‌ದಿಂದ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ ಯಲ್ಲಿ ಉತ್ತರ ಕನ್ನಡ ಜಿಲ್ಲೆಯಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ. ಇವರು ಈ ಹಿಂದೆಯೂ ವಿವಿಧ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿ ಆಯ್ಕೆಯಾಗಿದ್ದರು. ಇವರ ಈ ಸಾಧನೆಗೆ ತಾಲೂಕಿನ ಹಲವರು ಅಭಿನಂದಿಸಿದ್ದಾರೆ.
ರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಮಂಜುನಾಥ ಎಂ. ನಾಯ್ಕ
