Slide
Slide
Slide
previous arrow
next arrow

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ ಪಾರದರ್ಶಕವಾಗಿರಲಿ: ಎಡಿಸಿ ಸಾಜಿದ್ ಮುಲ್ಲಾ

300x250 AD

ಕಾರವಾರ: ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಜ.19 ಮತ್ತು 25 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಈ ಪರೀಕ್ಷೆಗಳು ಅತ್ಯಂತ ಪಾರದರ್ಶಕವಾಗಿ, ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಿರುವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚನೆ ನೀಡಿದರು.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆಪಿಎಸ್‌ಸಿ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾಗುತ್ತಿರುವ ಪರೀಕ್ಷೆಗಳ ಕುರಿತು, ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನವರಿ 19 ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ ಪರೀಕ್ಷೆಯು ಕಾರವಾರ ನಗರದ 3 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಜನವರಿ 25 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ನಿರ್ದಿಷ್ಟ ಪತ್ರಿಕೆ ಪರೀಕ್ಷೆಯು ನಗರದ 3 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸಾಮಾನ್ಯ ಪತ್ರಿಕೆ ಪರೀಕ್ಷೆಗೆ 1112 ಅಭ್ಯರ್ಥಿಗಳು ಹಾಗೂ ನಿರ್ದಿಷ್ಟ ಪತ್ರಿಕೆಗೆ 1056 ಅಭ್ಯರ್ಥಿಗಳು ಹಾಜರಾಗಲಿದ್ದಾರೆ ಎಂದರು.
ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗುವುದು ಎಂದ ಅವರು ಪರೀಕ್ಷಾ ಕೇಂದ್ರಗಳಲ್ಲಿ ಪೀಠೋಪಕರಣ ವ್ಯವಸ್ಥೆ, ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಮಾಡಬೇಕು. ಬಸ್ ಸಂಚಾರ ವ್ಯವಸ್ಥೆಯಲ್ಲಿ ಮತ್ತು ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಅಡಚಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ನಿಗಧಿತ ಸಮಯಕ್ಕೆ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ನಿಯೋಜಿತ ಅಧಿಕಾರಿಗಳು ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪರೀಕ್ಷೆಗಳನ್ನು ಶಾಂತಿಯುತವಾಗಿ, ಯಾವುದೇ ಅವ್ಯವಹಾರ, ಗೊಂದಲಗಳಿಗೆ ಆಸ್ಪದವಾಗದಂತೆ ಯಶಸ್ವಿಯಾಗಿ ನಡೆಸಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಡಿವೈಎಸ್ಪಿ ಗಿರೀಶ್, ಜಿಲ್ಲಾ ಖಜಾನಾಧಿಕಾರಿ ಸೇರಿದಂತೆ ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

300x250 AD
Share This
300x250 AD
300x250 AD
300x250 AD
Back to top