ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ “Ecotourism: Harnessing Travel to Discover Nature, Promote Conservation and Support Sustainable Development” ವಿಷಯದ ಮೇಲೆ ಫೆ.19 ರಿಂದ 21 ವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳವನ್ನು ಅಕಾಡೆಮಿಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಸಂಶೋಧನಾ ಪ್ರಬಂಧ ಪ್ರಸ್ತುತಿ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ಸಂಶೋಧನಾ ಪ್ರಬಂಧಗಳಿಗೆ ಬಹುಮಾನವನ್ನು ನೀಡಲಾಗುವುದು ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಶೈಕ್ಷಣಿಕ ತಜ್ಞರು, ಯುವ ಉದ್ಯಮದಾರರು ಭಾಗವಹಿಸಬಹುದಾಗಿದೆ.
ಆಸಕ್ತ ಪ್ರತಿನಿಧಿಗಳು ಫೆ.12 ರೊಳಗಾಗಿ (Google form- https://forms.gle/WCW9krCt8sGQUP55A) ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ;Tel:+919845258894, Tel:+919686449019 ,Tel:+919620767819 ಗೆ ಹಾಗೂ ಅಕಾಡೆಮಿಯ ವೆಬ್ ಸೈಟ್: https//:kstacademy.in ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.