ಅಂಕೋಲಾ: ತಾಲೂಕಿನ ಬೆಳಸೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ (ಆಂಗ್ಲ ಮಾಧ್ಯಮ) ಶಾಲೆಗೆ 2025-26ನೇ ಸಾಲಿನ 6 ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
2024-25ನೇ ಸಾಲಿನಲ್ಲಿ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಜ.25 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಫೆ. 15 ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ, ಹಾಗೂ “ಮಾಹಿತಿ ಪುಸ್ತಕ-2025” ವನ್ನು ಪ್ರಾಧಿಕಾರದ ವೆಬ್ ಸೈಟ್ https://kea.kar.nic.in ನಲ್ಲಿ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವೆಬ್ಸೈಟ್: https://kreis.kar.nic.in ನಲ್ಲಿ ಪ್ರಚುರ ಪಡಿಸಲಾಗಿದೆ. ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಫೆ.6 ರಿಂದ ಆಯಾ ವಸತಿ ಶಾಲೆಗಳಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು: ವಿದ್ಯಾರ್ಥಿಯ (ಎಸ್.ಎ.ಟಿ.ಎಸ್) ನಂ, ವಿದ್ಯಾರ್ಥಿಯ ಇತ್ತೀಚಿನ 2 ಭಾವಚಿತ್ರ, ಮೀಸಲಾತಿ ಪ್ರಯೋಜನಗಳನ್ನು ಕೋರಿರುವ ಪಕ್ಷದಲ್ಲಿ ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸ್ಥಳೀಯ ಅಭ್ಯರ್ಥಿ ಎಂದು ರುಜುವಾತು ಪಡಿಸಲು ಅಗತ್ಯವಾದ ಆಧಾರ್ ಕಾರ್ಡ್/ ರೇಷನ್ ಕಾರ್ಡ್/ ಸ್ಥಳೀಯ ಪ್ರಮಾಣ ಪತ್ರ, ವಿಶೇಷ ವರ್ಗಗಳಿಗೆ ಸಂಬಂಧಿಸಿದ ಪ್ರಮಾಣ ಪತ್ರ.
ಆರ್ಹ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಬೆಳಸೆ, ಅಂಕೋಲಾ ದೂರವಾಣಿ ಸಂಖ್ಯೆ:Tel:+919480022044 ನ್ನು ಸಂಪರ್ಕಿಸುವಂತೆ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.