ಬನವಾಸಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮದ ಅಡಿಯಲ್ಲಿ ಸಮೀಪದ ಕಂತ್ರಾಜಿ ಗ್ರಾಮದ ನಿರ್ಗತಿಕ ಕುಟುಂಬಸ್ಥರಾದ ಮಲ್ಲಿಕಾರ್ಜುನ ಬಡಿಗೇರ ಎಂಬುವವರಿಗೆ ಮಂಜೂರಾದ ವಾತ್ಸಲ್ಯ ಮನೆಯ ಭೂಮಿ ಪೂಜಾ ಕಾರ್ಯಕ್ರಮವನ್ನು ಬುಧವಾರ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಸುಧೀರ ನಾಯರ್ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಜ್ಞಾನ ವಿಕಾಸ ಕೇಂದ್ರದ ತಾಲ್ಲೂಕು ಸಮನ್ವಯಾಧಿಕಾರಿ ಮಲ್ಲಿಕಾ ಶೆಟ್ಟಿ, ಸೇವಾ ಪ್ರತಿನಿಧಿ ಶಿವಾಜಿ ನಾಯ್ಕ್, ಫಲಾನುಭವಿಯಾದ ಮಲ್ಲಿಕಾರ್ಜುನ ಬಡಿಗೇರ ಹಾಗೂ ರಾಣಿ ಚೆನ್ನಮ್ಮ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಇದ್ದರು.