ಶಿರಸಿ: ಗಾಂಜಾ ಮಾದಕವಸ್ತು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ಪರೀಕ್ಷೆ ದೃಢಪಟ್ಟ ಹಿನ್ನೆಲೆಯಲ್ಲಿ ಶಿರಸಿ ನಗರ ಠಾಣೆ ಪೊಲೀಸರು ಒರ್ವನನ್ನು ಬಂಧಿಸಿರುವ ಘಟನೆ ವರದಿಯಾಗಿದೆ.
ನಗರದ ಹಾಲೊಂಡ ಬಡಾವಣೆಯ ನಿವಾಸಿಯಾದ ಸೋಹನ್ ಲೋಕೇಶ್ ಭಂಡಾರಿ ಈತನು ಗಾಂಜಾ ಅಮಲು ಪದಾರ್ಥ ಸೇವನೆ ಮಾಡಿದ ಸ್ಥಿತಿಯಲ್ಲಿ ಬೆಳಗ್ಗೆ ಮಾರಿಕಾಂಬಾ ನಗರದ ಹತ್ತಿರ ಸಿಕ್ಕಿ ಬಿದ್ದಿದ್ದು, ಆತನನ್ನು ವಶಕ್ಕೆ ಪಡೆದು ನಗರದ ಪಂಡಿತ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ದ ಗುನ್ನೆ ನಂ 05/2025 ಕಲಂ 27 (B) NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಶಿರಸಿ ಉಪವಿಭಾಗದ ಡಿಎಸ್‌ಪಿ ಗಣೇಶ ಕೆ.ಎಲ್, ಪ್ರಭಾರ ವೃತ್ತ ನಿರೀಕ್ಷಕರಾದ ಪಿ.ಸೀತಾರಾಮ ಮಾರ್ಗದರ್ಶನದಲ್ಲಿ ಶಿರಸಿ ನಗರ ಠಾಣೆ ಪಿಎಸ್ಐ ನಾಗಪ್ಪ ಬಿ. ಹಾಗೂ ಸಿಬ್ಬಂದಿಗಳಾದ ಹನುಮಂತ ಕಬಾಡಿ, ಮಂಜುನಾಥ ಕಾಶಿಕೋವಿ, ಪ್ರವೀಣ್ ಎನ್., ರಾಜಶೇಖರ ಅಂಗಡಿ, ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.