ದಾಂಡೇಲಿ : ನಗರ ಠಾಣೆ ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಅಪರಾದ ಕೃತ್ಯ ಎಸೆಗಿದ ಆರೋಪಿಗಳಿಗೆ ಡಿವೈಎಸ್ಪಿ ಶಿವಾನಂದ ಮದರಖಂಡಿ ನೇತೃತ್ವದಲ್ಲಿ ನಗರ ಠಾಣೆಯ ಆವರಣದಲ್ಲಿ ಪೆರೇಡ್ ನಡೆಸಿ ಖಡಕ್ ಎಚ್ಚರಿಕೆ ನೀಡಲಾಯಿತು.
ಈ ಹಿಂದೆ ಗಾಂಜಾ, ಪೋಕ್ಸೋ, ಕಳ್ಳತನ, ಕೊಲೆ ಪ್ರಯತ್ನ ಮುಂತಾದ ಬೇರೆ ಬೇರೆ ಕೃತ್ಯಗಳಲ್ಲಿ ಭಾಗಿಯಾಗಿ ಪ್ರಕರಣ ಎದುರಿಸುತ್ತಿರುವವರಿಗೆ ಖಡಕ್ ಎಚ್ಚರಿಕೆಯನ್ನು ನೀಡಿ ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಅಪರಾಧ ಕೃತ್ಯಗಳನ್ನು ನಡೆಸದಂತೆ ಮತ್ತು ಭಾಗಿಯಾಗದಂತೆ ಕಠಿಣ ಎಚ್ಚರಿಕೆಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ನಗರ ಠಾಣೆಯ ಪಿಎಸ್ಐ ಗಳಾದ ಅಮೀನ್ ಅತ್ತಾರ ಮತ್ತು ಕಿರಣ್ ಪಾಟೀಲ ಹಾಗೂ ಗ್ರಾಮೀಣ ಠಾಣೆಯ ಪಿಎಸ್ಐ ಶಿವಾನಂದ ನಾವದಗಿ ಹಾಗೂ ನಗರ ಮತ್ತು ಗ್ರಾಮೀಣ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 24 ಜನರಿಗೆ ಈ ಪರೇಡ್ ಮಾಡಲಾಯಿತು.