ಕಾರವಾರ: ಪರಿಶಿಷ್ಠ ಜಾತಿ ಉಪಯೋಜನೆಯಡಿಯಲ್ಲಿ ಯುವಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ದೃಷ್ಠಿಯಿಂದ ಜಿಮ್ ಫಿಟ್ನೆಸ್ ಹಾಗೂ ನಿರುಪಣಾ ಮತ್ತು ವಾರ್ತಾ ವಾಚಕ ತರಬೇತಿ ಶಿಬಿರವನ್ನು ಹಮ್ಮಿಕೊಂಡ್ಡಿದ್ದು, ಸದರಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಮ್ ಫಿಟ್ನೆಸ್ 15 ದಿನಗಳ ತರಬೇತಿಯು ಜ.27 ರಿಂದ ಫೆ,10 ವರೆಗೆ ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ ಹಾಗೂ ನಿರುಪಣಾ ಮತ್ತು ವಾರ್ತಾ ವಾಚಕ 8 ದಿನಗಳ ತರಬೇತಿಯು ಫೆ.11 ರಿಂದ ಫೆ.18 ರವರೆಗೆ ಬೆಂಗಳೂರಿನ ಯುವನಿಕ ಸಭಾಂಗಣದಲ್ಲಿ ನಡೆಯಲಿದೆ.
ತರಬೇತಿ ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳು ದೂರವಾಣಿ/ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಶಿಬಿರದಲ್ಲಿ ಹಾಜರಾಗುವ ಯುವಕ/ಯುವತಿಯರಿಗೆ ಲಘು ಉಪಹಾರ ಮತ್ತು ಹೊರ ಜಿಲ್ಲೆಗಳಿಂದ ಭಾಗವಹಿಸುವ ಶಿಬಿರಾರ್ಥಿಗಳಿಗೆ ಸಾಮಾನ್ಯ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.
ಆಸಕ್ತ ಪರಿಶಿಷ್ಠ ಜಾತಿ ಯುವಕ/ಯುವತಿಯರು ಜ.23 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ:Tel:+9108382201824 ಹಾಗೂ ಮೊ: Tel:+919480886551 ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.