ಕಾರವಾರ: ಜಿಲ್ಲಾಡಳಿತ ಉತ್ತರ ಕನ್ನಡದ ವತಿಯಿಂದ 76ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಜನವರಿ 26 ರಂದು ಬೆಳಗ್ಗೆ 9 ಗಂಟೆಗೆ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯಲಿದೆ.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಧ್ವಜಾರೋಹಣ ನೇರವೇರಿಸಿ, ಗಣರಾಜ್ಯೋತ್ಸವ ಕಾರ್ಯಕ್ರಮದ ಸಂದೇಶ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಸತೀಶ್ ಕೆ. ಸೈಲ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಉಳ್ವೇಕರ ನಗರ ಸಭೆ ಅಧ್ಯಕ್ಷ ರವಿರಾಜ ಚಂದ್ರಹಾಸ ಅಕೋಲೆಕರ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.