ಕಾರವಾರ: ಉತ್ತರ ಕನ್ನಡ ಜಿಲ್ಲಾಡಳಿತ ವತಿಯಿಂದ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾಯಕ್ರಮವು ಜ.25 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಎಸ್.ವಿಜಯ ಕುಮಾರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ. ಜಿಲ್ಲಾ ಪೊಲೀಸ್ ಅಧೀಕ್ಷಕ ನಾರಾಯಣ ಎಮ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಪಾಲ್ಗೊಳ್ಳಲಿದ್ದಾರೆ.