ಕಾರವಾರ: ಹಾವೇರಿಯಿಂದ ಕುಮಟಾ ಕಡೆಗೆ ವ್ಯಾಪಾರಕ್ಕೆಂದು ತರಕಾರಿ ಹಾಗೂ ಹಣ್ಣುಗಳನ್ನು ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಗುಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಸುಕಿನ ಜಾವ ಪಲ್ಟಿಯಾಗಿ 9 ಜನ ಮೃತ ಪಟ್ಟ ಘಟನೆಯ ಸುದ್ದಿ ತಿಳಿದು ಮನಸ್ಸಿಗೆ ದುಃಖ ಉಂಟಾಯಿತು. ಹೊಟ್ಟೆ ಪಾಡಿಗಾಗಿ ತಮ್ಮ ದಿನನಿತ್ಯ ಜೀವನ ಸಾಗಿಸಲು ಬೇರೆ ಊರುಗಳಿಂದ ವ್ಯಾಪಾರಕ್ಕೆ ಬಂದವರು ಕ್ರೂರ ವಿಧಿಯ ಆಟಕ್ಕೆ ಬಲಿಯಾಗಿದ್ದು ನೋವಿನ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ, ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 16 ಜನರು ಶೀಘ್ರವೇ ಗುಣ ಮುಖರಾಗಲಿ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಪ್ರಾರ್ಥಿಸಿದ್ದಾರೆ.