ಕಾರವಾರ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2019-20 ಮತ್ತು 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಸಿ.ಬಿ.ಎಸ್.ಸಿ., ಐ.ಸಿ.ಎಸ್.ಸಿ ಹಾಗೂ 2020-21 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನಿಯರಿಂಗ್ ಇತರೆ ಕೋರ್ಸುಗಳಲ್ಲಿ ಶೇ. 60ಕ್ಕಿಂತ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಜಾತಿ ಪ್ರಮಾಣ ಪತ್ರ, ಅಂಕಪಟ್ಟಿ, ಬ್ಯಾಂಕ್ ಪಾಸ್‍ಬುಕ್ ಪ್ರತಿ ಹಾಗೂ ಫೆÇೀಟೋಗಳೊಂದಿಗೆ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎಸ್. ಪುರುಷೋತ್ತಮ್ ಪ್ರಕಟಣೆಯಲ್ಲಿ ಬುಧವಾರ ತಿಳಿಸಿದ್ದಾರೆ.