ಶಿರಸಿ: ನಗರದ ಬನವಾಸಿ ರಸ್ತೆಯಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಾಲಯ ಸಂಘಧಾಮದಲ್ಲಿ 76ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ವೇಳೆ ಉಪಸ್ಥಿತರಿದ್ಸ ಸಂಘದ ಹಿರಿಯ ಕಾರ್ಯಕರ್ತರು ಮಾತನಾಡಿ, ಸಂವಿಧಾನ ರಚನೆಯಲ್ಲಿ ಶ್ರಮಿಸಿದ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನಾದರ್ಶ ನಮ್ಮ ಬದುಕಿಗೆ ಮಾದರಿಯಾಗಿದೆ. ಮತ್ತು ಭಾರತದ ಪರಮೋಚ್ಛ ಗ್ರಂಥವಾದ ಸಂವಿಧಾನವನ್ನು ಗೌರವಿಸಿ ಅದರಂತೆ ನಡೆಯುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದು ಹೇಳಿದರು.