ಹೊನ್ನಾವರ : ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ತಾಲೂಕ ಆಸ್ಪತ್ರೆ ಆಡಳಿತಾಧಿಕಾರಿ ಡಾ. ರಾಜೇಶ ಕಿಣಿ ಧ್ವಜಾರೋಹಣ ಮಾಡಿ ಮಾತನಾಡಿ ನಾವೆಲ್ಲ ಸೇರಿ ಆಸ್ಪತ್ರೆಯ ಶ್ರೇಯೋಭಿವೃದ್ಧಿಗಾಗಿ ಕೆಲಸ ಮಾಡೋಣ. ಆರೋಗ್ಯಯುತ ಸಮಾಜ ಕಟ್ಟುವಲ್ಲಿ ಕಂಕಣಬದ್ಧರಾಗೋಣ. ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಬದುಕೋಣ. ಸಂವಿಧಾನವನ್ನು ಗಟ್ಟಿಗಳಿಸೋಣ ಎಂದು ಹೇಳಿ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ಡಿಜಟಲಿಕರಣದಲ್ಲಿ ಪ್ರಮುಖ ಪಾತ್ರ ವಹಿಸುವ ಸಿಬ್ಬಂಧಿಗಳಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ನಂತರ ಆಸ್ಪತ್ರೆಯ ಎಲ್ಲ ವೈದ್ಯರು ಸಿಬ್ಬಂಧಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಗಣರಾಜ್ಯೋತ್ಸವದ ಪ್ರಯುಕ್ತ ಏರ್ಪಡಿಸಲಾದ ರಂಗೋಲಿ,ಮತ್ತು ಚಿತ್ರಕಲೆ ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನ ನೀಡಲಾಯಿತು. ಸಿಬ್ಬಂಧಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.ಸಹಾಯಕ ಆಡಳಿತಾಧಿಕಾರಿ ಶ್ರೀಮತಿ ಶಶಿಕಲಾ ನಾಯ್ಕ ಸೇರಿದಂತೆ ಎಲ್ಲ ತಜ್ಞ ವೈದ್ಯರುಗಳು, ಸಿಬ್ಬಂಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದರು. ಹಿರಿಯ ಕ್ಷಕಿರಣ ಅಧಿಕಾರಿಗಳಾದ ಚಂದ್ರೇಖರ ಕಳಸ ಕಾರ್ಯಕ್ರಮ ನಿರ್ವಹಿಸಿದರು.