ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ರಂಗನಾಥ ಸಭಾಂಗಣದ ಮುಂಭಾಗದಲ್ಲಿ ಸಂಭ್ರಮ ಸಡಗರದಿಂದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಾಗದ ಕಾರ್ಖಾನೆಯ ತಾಂತ್ರಿಕ ವಿಭಾಗದ ಅಧ್ಯಕ್ಷರಾದ ಅನುಜ್ ತಯಾಳ್ ಧ್ವಜಾರೋಹಣವನ್ನು ನೆರವೇರಿಸಿ, ಭವ್ಯ ಭಾರತದಲ್ಲಿ ಜನ್ಮವೆತ್ತ ನಾವೆಲ್ಲಾ ಭಾಗ್ಯವಂತರು. ಅನೇಕ ಮಹನೀಯರ ತ್ಯಾಗ ಬಲಿದಾನದಿಂದಾಗಿ ಈ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಡಾ. ಬಿ.ಆರ್ ಅಂಬೇಡ್ಕರ್ ಅವರು ಈ ದೇಶಕ್ಕೆ ಬಹುದೊಡ್ಡ ಸಂವಿಧಾನವನ್ನು ನೀಡುವ ಮೂಲಕ ನಾವೆಲ್ಲ ನೆಮ್ಮದಿಯ ಬದುಕನ್ನು ಕಾಣುವಂತಾಗಲು ಸಾಧ್ಯವಾಗಿದೆ. ಪರಸ್ಪರ ಭಾತೃತ್ವ ಹಾಗೂ ಸಾಮಾರಸ್ಯದ ಸಮಾಜ ನಿರ್ಮಾಣದ ಮೂಲಕ ರಾಷ್ಟ್ರದ ಸಮಗ್ರ ಅಭಿವೃದ್ಧಿಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳೋಣ ಎಂದರು.
ಮುಖ್ಯ ಅತಿಥಿಗಳಾಗಿ ಕಾರ್ಖಾನೆಯ ಹಣಕಾಸು ವಿಭಾಗದ ಹಿರಿಯ ಉಪಾಧ್ಯಕ್ಷರಾದ ಅಶೋಕ್ ಶರ್ಮಾ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿ ರಾಘವೇಂದ್ರ ಜೆ.ಆರ್ ಸೇರಿದಂತೆ ಕಾರ್ಖಾನೆಯ ಹಿರಿಯ, ಕಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ ತಿವಾರಿ ಅವರು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.