ಶಿರಸಿ: ಜ.26ರಂದು 76ನೇ ಗಣರಾಜ್ಯೋತ್ಸವದ ಪ್ರಯುಕ್ತ ಶಿರಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಟ್ಟ ಕಾರ್ಯಕ್ರಮಗಳಲ್ಲಿ ಇಸಳೂರಿನ ಶ್ರೀನಿಕೇತನ ಶಾಲೆಯ ಸ್ಕೌಟ್-ಗೈಡ್ಸ್ ಮತ್ತು ಸೇವಾದಳ ತಂಡಗಳು ಭಾಗವಹಿಸಿದ್ದವು. ದೈಹಿಕ ಶಿಕ್ಷಕರ ಮಾರ್ಗದರ್ಶನದಲ್ಲಿ ಶಾಲೆಯ ವಿದ್ಯಾರ್ಥಿನಿಯರ ಸೇವಾದಳ ತಂಡವು ದ್ವಿತೀಯ ಬಹುಮಾನವನ್ನು ಗೆದ್ದಿರುವುದು ಶಾಲೆಗೆ ಹೆಮ್ಮೆಯ ವಿಷಯವಾಗಿದ್ದು, ಆಡಳಿತ ಮಂಡಳಿಯ ಸದಸ್ಯರು, ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಜನಮೆಚ್ಚುಗೆ ಪಡೆದ ಶ್ರೀನಿಕೇತನ ಪಥಸಂಚಲನ
