ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿ ವತಿಯಿಂದ “Cyber Security and Internet Safety” ವಿಷಯದ ಕುರಿತು ಫೆ.5 ರಿಂದ 7 ವರೆಗೆ ಮೂರು ದಿನಗಳ ಕಾರ್ಯಾಗಾರವನ್ನು ಅಕಾಡಮಿಯ ಬೆಂಗಳೂರು ಕಚೇರಿಯಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಾಗಾರದಲ್ಲಿ “Cyber Security and Internet Safety” ಬಗ್ಗೆ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಆನ್‌ಲೈನ್ ವಂಚನೆಗಳನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುಂಜಾಗೃತ ಕ್ರಮಗಳು ಮತ್ತು ಅಂತರ್ಜಾಲ ಸುರಕ್ಷತೆ ಉಪಯೋಗದ ಬಗ್ಗೆ ವಿವಿಧ ನುರಿತ ತಜ್ಞರಿಂದ ಉಪನ್ಯಾಸಗಳನ್ನು ಏರ್ಪಡಿಸಲಾಗಿದೆ. ಕಾರ್ಯಾಗಾರದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಭಾಗವಹಿಸಲಿದ್ದಾರೆ.
ಆಸಕ್ತ ಪ್ರತಿನಿಧಿಗಳು ಫೆ.3 ರೊಳಗಾಗಿ (Google form- https://forms.gle/9Fds6N5vjzLpjNGX7) ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ವೈಜ್ಞಾನಿಕಾಧಿಕಾರಿ ಶ್ರೀನಿವಾಸ ಮೊ ಸಂಖ್ಯೆ;Tel:+919620767819, ಚಂದ್ರಶೇಖರಮೂರ್ತಿ ಮೊ:Tel:+919686449019ನ್ನು ಅಥವಾ ಅಕಾಡೆಮಿಯ ವೆಬ್ ಸೈಟ್ https//:kstacademy.in ವೀಕ್ಷಿಸಬಹುದೆಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.