ಕಾರವಾರ: ಕರ್ನಾಟಕ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022-23 ಮತ್ತು 2023-24 ನೇ ಸಾಲಿನಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳಿಗೆ ಸೇವಾ ಸಿಂಧು ಪೋರ್ಟಲ್ ವೆಬ್ ಸೈಟ್ https://sevasindhugs.karnataka.gov.in ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಯೋಜನಾ ಉದ್ಯೋಗ ವಿನಿಮಯ ಕಚೇರಿ ಕಾರವಾರದಲ್ಲಿ ಹಮ್ಮಿಕೊಳ್ಳಲಾದ ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ಫೆ.15 ರವರೆಗೆ ವಿಸ್ತರಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.
ಪದವಿಧರರಿಗೆ ಪ್ರತಿ ತಿಂಗಳು ರೂ.3000/- ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ.1500/- ಗಳನ್ನು ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತದೆ. ಫಲಿತಾಂಶದ ದಿನಾಂಕದಿAದ 180 ದಿನಗಳ ನಂತರ ಹೆಸರನ್ನು ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ಮೊದಲ ಕಂತಿನ ಹಣ ಪಾವತಿಯಾದ ನಂತರ ಪ್ರತಿ ತಿಂಗಳು 25 ನೇ ತಾರೀಖಿನೊಳಗಾಗಿ ಸ್ವಯಂ ಘೋಷಣೆ ಮಾಡುವುದು ಕಡ್ಡಾಯವಾಗಿದೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಉದ್ಯೋಗಿ ಅಥವಾ ನಿರುದ್ಯೋಗಿ ಎನ್ನುವ ಕುರಿತು ಸ್ವಯಂ ಘೋಷಣೆ ಮಾಡಿ ಸ್ವೀಕೃತಿ ಪಡೆಯುವುದು ಅಗತ್ಯವಾಗಿದೆ.
ಅಭ್ಯರ್ಥಿಗಳು ಗ್ರಾಮ ಒನ್ ಕೇಂದ್ರ ಅಥವಾ ಕರ್ನಾಟಕ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆ, ಮೊಬೈಲ್ ಸಂಖ್ಯೆ ಹೊಂದಿರಬೇಕು, ಅರ್ಜಿ ಸಲ್ಲಿಸಿದ ನಂತರ ಸ್ವೀಕೃತಿ ಪತ್ರದಲ್ಲಿ ಸೂಚಿಸಿರುವಂತೆ. ಸಲ್ಲಿಸಿದ ದಾಖಲಾತಿಗಳ ಆಧಾರದ ಮೇಲೆ ಅರ್ಜಿದಾರರು ಸಂಬAಧಿಸಿದ ಕಚೇರಿಗಳಾದ ಡಿ.ಡಿ.ಪಿ.ಆಯ್.(ಎಸ್.ಎಸ್.ಎಲ್.ಸಿ ಅಂಕಪಟ್ಟಿ) ಡಿ.ಡಿ.ಪಿ.ಯು. (ಪಿಯುಸಿ ಅಂಕಪಟ್ಟಿ) ಉದ್ಯೋಗ ವಿನಿಮಯ ಕಚೇರಿ (ಪದವಿ/ ಡಿಪ್ಲೋಮಾ ಅಥವಾ ಇತ್ಯಾದಿ) ಇವರ ಲಾಗಿನ್ ನಲ್ಲಿ ಭೌತಿಕ ಪರಿಶೀಲನೆಗೆ ಬಾಕಿ ಉಳಿದಿದ್ದರೆ, ಸಂಬAಧಿಸಿದ ಪ್ರಮಾಣ ಪತ್ರಗಳೊಂದಿಗೆ, ಭೇಟಿ ನೀಡಿ ಶೀಘ್ರವಾಗಿ ಭೌತಿಕ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಯೋಜನಾ ಉದ್ಯೋಗ ವಿನಿಮಯ ಕಚೇರಿ, ಕಾರವಾರ ದೂರವಾಣಿ ಸಂಖ್ಯೆ: 08382-226368 ಅಥವಾ ಯುವನಿಧಿ ಸಹಾಯವಾಣಿ ಸಂಖ್ಯೆ:18005997154 ನ್ನು ಸಂಪರ್ಕಿಸುವಂತೆ ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.