Slide
Slide
Slide
previous arrow
next arrow

ವೇದಾಂತಾಚಾರ್ಯ ಶ್ರೀ ಮಂಜುನಾಥ ಭಾರತೀ ಸ್ವಾಮೀಜಿಗಳಿಂದ‌ ಕೇಂದ್ರ ಗೃಹ ಸಚಿವರ ಭೇಟಿ

300x250 AD

ಹಳಿಯಾಳ : ಉತ್ತರ ಪ್ರದೇಶದ ಪ್ರಯಾಗರಾಜ್ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿರುವ ಹಳಿಯಾಳದವರಾದ ಮರಾಠಾ ಜಗದ್ಗುರು ವೇದಾಂತಾಚಾರ್ಯ ಶ್ರೀ ಶ್ರೀ ಮಂಜುನಾಥ ಭಾರತೀ ಸ್ವಾಮೀಜಿಯವರು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ರವರನ್ನು ಬುಧವಾರ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ಭೇಟಿ ಮಾಡಿದರು.

ಇದೇ ಸಂದರ್ಭದಲ್ಲಿ ಪ್ರಖ್ಯಾತ ಪತಂಜಲಿ ಆಯುರ್ವೇದ ಕೇಂದ್ರದ ಯೋಗಗುರು ಶ್ರೀ ಬಾಬಾ ರಾಮದೇವ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಜೊತೆಯು ಚರ್ಚೆ ನಡೆಸಿದರು.

300x250 AD

ಇದಕ್ಕೂ‌ ಮುನ್ನ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಜಗದ್ಗುರು ವೇದಾಂತಾಚಾರ್ಯ ಶ್ರೀ ಶ್ರೀ ಮಂಜುನಾಥ ಭಾರತೀ ಸ್ವಾಮೀಜಿಯವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿದರು. ಪೂಜ್ಯರು ಪೂಜ್ಯ ಶ್ರೀ ರವಿಶಂಕರ್ ಗುರೂಜಿ ಸೇರಿದಂತೆ ರಾಜ್ಯದ ವಿವಿಧ ಮಠಗಳ ಸ್ವಾಮೀಜಿಯವರ ಜೊತೆ ಮಹಾ ಕುಂಭಮೇಳದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ.

Share This
300x250 AD
300x250 AD
300x250 AD
Back to top